ಮಕ್ಕಳ ಕಥೆ:- ಸ್ವಾರ್ಥಿಯಾಗದಿರಿ
ಕಾನನದ ಮಧ್ಯದಲ್ಲಿ ಒಂದು ಗಿಡುಗನ ಗೂಡು ಹಾಗೂ ಕಾಗೆಯ ಗೂಡಿತ್ತು. ಎರಡೂ ತಮ್ತಮ್ಮ ಗೂಡಿನಲ್ಲಿ ಮರಿಗಳ ಜೊತೆಗೆ ವಾಸವಾಗಿದ್ದವು. "ಚೀವ್ ಚೀವ್..." ಎಂಬ ಚಿಲಿಪಿಲಿಯು ಯಾವಾಗಲೂ ಕೇಳಿಸುತಲಿತ್ತು. ಗಿಡುಗನು ತನ್ನ ಗೂಡಿನ ಮೇಲೆಯೇ ಗಸ್ತು ಹೊಡೆಯುತ್ತಾ ಇರುತ್ತಿತ್ತು. ದೂರದೂರಿಗೆ ಹಾರಿ ಹೋಗಿ ಗಂಡು ಗಿಡುಗವು ಆಹಾರ ತರುವ ತನಕ ಹೆಣ್ಣು ಗಿಡುಗವು ಮರಿಗಳನ್ನು ಕಾಯುತಲಿತ್ತು. ಇದನ್ನೆಲ್ಲ ದೂರದಿಂದ ನೋಡುತ್ತಿದ್ದ ಕಾಗೆಗೆ , "ಆ ಗೂಡಿನಲ್ಲಿವೇನಿರಬಹುದು. ಈ ಗಿಡುಗ ಏಕೆ ಗಸ್ತು ಹೊಡೆಯುತ್ತಿದೆ.."ಎಂದು ಪ್ರಶ್ನೆ ಮೂಡಿತು. ಒಮ್ಮೆ ಹೋಗಿ ನೋಡಲೇ ಬೇಕು ಎಂಬ ಕುತೂಹಲ ಹೆಚ್ಚಿತು. ಆದರೆ ಆ ಹೆಣ್ಣು ಗಿಡುಗವೂ ಎಲ್ಲಿಗೂ ಕದಲುತ್ತ ಇರಲಿಲ್ಲ.
ಒಮ್ಮೆ ಆ ಸಮಯ ಬಂದೇ ಬಿಟ್ಟಿತು. ಹೆಣ್ಣು ಗಿಡುಗ ಆಕಾಶದೆತ್ತರಕ್ಕೆ ಹಾರಿ ಮಾಯವಾಯಿತು. ಆಗ ಕಾಗೆಗೆ ಬಹಳ ಸಂತೋಷವಾಗಿ ಗಿಡುಗನ ಗೂಡಿನ ಬಳಿ ಹಾರಿ ಬಂದಿತು. ಅಲ್ಲಿ ನೋಡಿದರೆ ಪರಮಾಶ್ಚರ್ಯ. " ಗಿಡುಗನಿಗೆ ಪುಟ್ಟಪುಟ್ಟ ಮೂರು ಮರಿಗಳಿದ್ದವು. ಎಳೆಮರಿಗಳ ನೋಡಿ ಕಾಗೆಯೆ ಬಾಯಲ್ಲಿ ನೀರು ಬಂದಿತು. ಹೇಗಾದರೂ ಮಾಡಿ ಇದನ್ನು ಹೊತ್ತೊಯ್ದು ತನ್ನ ಮರಿಗಳಿಗೆ ಆಹಾರವಾಗಿ ಕೊಡಬೇಕು ಎಂಬ ಕೆಟ್ಟ ಆಲೋಚನೆ ಮಾಡಿತು. ಹಾಗೆಯೇ ಒಂದನ್ನು ಅಲ್ಲಿಯೇ ತಿಂದು, ಒಂದನ್ನು ತನ್ನ ಕೊಕ್ಕಿನಿಂದ ಕುಕ್ಕಿ ಕುಕ್ಕಿ ಸಾಯಿಸಿತು. ಹಾಗೆಯೇ ಸತ್ತ ಗಿಡುಗನ ಮರಿಯನ್ನು ಕಾಲಿನಲ್ಲಿ ಬಿಗಿಹಿಡಿತು ತನ್ನ ಗೂಡಿನತ್ತ ಹಾರಿಹೋಯಿತು.
ಅಲ್ಲಿ ನೋಡಿದರೆ ಏನ್ ಆಶ್ಚರ್ಯ. ಗಾಬರಿ ಹುಟ್ಟಿಸುವ ಘಟನೆ ನಡೆದಿತ್ತು. ತನ್ನ ಮರಿಗಳ ಪುಕ್ಕಗಳೆಲ್ಲ ಚೆಲ್ಲಪಿಲ್ಲಿಯಾಗಿ ಬಿದ್ದಿದ್ದವು. ಮರಿಗಳು ಕಾಣಿಸುತ್ತಿಲ್ಲ. "ಅಯ್ಯೋ... ನನ್ನ ಮರಿಗಳೆಲ್ಲಿ ??" ಎಂದು ಗೋಳಾಡಿತು. "ನಾನು ಅವುಗಳಿಗೆ ತಂದ ಈ ಹಸಿ ಮಾಂಸವನ್ನು ಏನು ಮಾಡಲಿ. ಇದನ್ನು ತಿನ್ನಲು ಈಗ ನನ್ನ ಮರಿಗಳೇ ಇಲ್ಲವಲ್ಲ .." ಎಂದು ಕೊರಗುತ್ತಾ ಕುಳಿತಿತು. ಆಗ ದೂರದಲ್ಲಿ ಅದೇ ಗಿಡುಗ ತನ್ನ ಕಾಲಿನಲ್ಲಿ ಏನೋ ಆಹಾರ ಹಿಡಿದಿರುವುದು ಕಾಣಿಸಿತು. ಏನೆಂದು ಕಾಗೆ ಅದರ ಕಡೆಗೆ ಧಾವಿಸಿ ನೋಡಿದರೆ ತನ್ನ ಮರಿಯ ಹಸಿಮಾಂಸವೇ ಆಗಿತ್ತು. ಅತ್ತ ಗಿಡುಗನಿಗೆ ಉಳಿದಿದ್ದ ಒಂದು ಮರಿ ಗಾಬರಿಯಿಂದ ಕಿರುಚುತ್ತ ಅಮ್ಮ ಬರುವುದನ್ನೇ ಕಾಯುತಲಿತ್ತು.
ನೀತಿ: ನಾವು ಕೇಡು ಬಯಸಿದರೆ ನಮಗೂ ಕೇಡು ಸಂಭವಿಸುತ್ತದೆ ಕಾಗೆ ಗಿಡುಗನ ಮರಿಗಳನ್ನು ಸಾಯಿಸಿದ ಹಾಗೆ ಗಿಡುಗವೂ ಸ್ವಾರ್ಥಿಯಾಗಿ ಕಾಗೆಯ ಮರಿಯನ್ನು ಸಾಯಿಸಿತ್ತು.
- ಸಿಂಧು ಭಾರ್ಗವ್.
ಬೆಂಗಳೂರು- ೨೧
![]() |
Google pick |

ಕರ್ಮ ನಮ್ಮ ಸುತ್ತ ಗಿರಕಿ ಹೊಡೆಯುತ್ತಿರುತ್ತದೆ
ReplyDeleteಅಲ್ವಾ ಅಮ್ಮ😊🙏